ಕರಾವಳಿ

ಸುಬ್ರಹ್ಮಣ್ಯ: ನದಿಯಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು



ಕಡಬ: ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಜ.18ರಂದು ನಡೆದಿದೆ.


ಮೃತ ಯುವಕರನ್ನು ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಹರಿಪ್ರಸಾದ್ (39ವ) ಮತ್ತು ಸುಜಿತ್ (28ವ) ಎಂದು ಗುರುತಿಸಲಾಗಿದೆ.

ಮೃತರಿಬ್ಬರೂ ಅವಿವಾಹಿತರಾಗಿದ್ದು, ತಮ್ಮ ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಕುಮಾರಧಾರ ನದಿಗೆ ಕುಲ್ಕುಂದ ಬಳಿ ನೀರಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ನೀರಲ್ಲಿ ಮುಳುಗಿದ ಇಬ್ಬರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!