ಕರಾವಳಿ

ಕುಂಬ್ರ ಮರ್ಕಝುಲ್ ಹುದಾದಲ್ಲಿ ನೂತನ ಆಡಳಿತ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ನೂತನ ಆಡಳಿತ ಕಚೇರಿ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.19ರಂದು ನಡೆಯಿತು. ಮರ್ಕಝ್ ಬಹರೈನ್ ಕಮಿಟಿ ವತಿಯಿಂದ ನಿರ್ಮಿಸುವ ಈ ಆಡಳಿತ ಕಚೇರಿ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದ ಶೈಖುನಾ ಮಹಮೂದುಲ್ ಫೈಝಿ ಓಲೆಮುಂಡೋವು ಮಾತನಾಡಿ ನೂತನ ಕಟ್ಟಡ ಆದಷ್ಟು ಬೇಗ ನಿರ್ಮಾಣಗೊಳ್ಳಲಿ ಎಂದು ಹೇಳಿ ಮರ್ಕಝ್ ಬಹರೈನ್ ಸಮಿತಿಯವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಅಬೂಶಝ ಅಬ್ದುರ್ರಝಾಕ್ ಖಾಸಿಮಿ, ಮರ್ಕಝುಲ್ ಹುದಾದ ಕೋಶಾಧಿಕಾರಿ ಯೂಸುಫ್ ಗೌಸಿಯಾ ಸಾಜ, ಸದಸ್ಯರಾದ ಯೂಸುಫ್ ಹಾಜಿ ಕೈಕಾರ, ಆಶಿಕುದ್ದೀನ್ ಅಖ್ತರ್, ಕರೀಂ ಹಾಜಿ ಕಾವೇರಿ, ಅನ್ವರ್ ಹುಸೈನ್ ಗೂಡಿನಬಳಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!