ಕರಾವಳಿ

ಕಾಳುಮೆಣಸು ಕೀಳುವಾಗ ಮರದಿಂದ ಬಿದ್ದು ನಿವೃತ್ತ ಮುಖ್ಯಶಿಕ್ಷಕ ಮೃತ್ಯು

ಪುತ್ತೂರು: ಕಾಳುಮೆಣಸು ಕೀಳುವಾಗ ತೆಂಗಿನ ಮರದಿಂದ ಬಿದ್ದು ನಿವೃತ್ತ ಮುಖ್ಯೋಪಾಧ್ಯಾಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆಯಲ್ಲಿ ಜ.19ರಂದು ನಡೆದಿದೆ.



ಮೃತರನ್ನು ಬೆಟ್ಟಂಪಾಡಿ ಗ್ರಾಮದ ಗುಮ್ಮಟ್ಟೆಗದ್ದೆ ನಿವಾಸಿ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ. ಮನೆಯ ಮುಂದೆ ತೆಂಗಿನ ಮರದ ಮೇಲೆ ಬೆಳೆದಿದ್ದ ಕಾಳು ಮೆಣಸು ಕೀಳಲು ಅಲ್ಯೂಮಿನಿಯಂ ಏಣಿ ಹತ್ತುತ್ತಿದ್ದಾಗ ಜಾರಿ ಏಣಿಯೊಂದಿಗೆ ಬಿದ್ದಿದ್ದಾರೆ.



ಕೆಳಗೆ ಬಿದ್ದಾಗ ನಾರಾಯಣ ನಾಯ್ಕ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮಾರ್ಗಮಧ್ಯೆ ಅವರು ಮೃತಪಟ್ಟರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!