ರಾಜಕೀಯರಾಜ್ಯ

ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ-ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ವಿರುದ್ದ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.



ಬಿಜೆಪಿಯ ಮಾಜಿ ಶಾಸಕರೊಬ್ಬರು ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ನನ್ನ ಹೆಸರು ಹಿಡಿದುಕೊಂಡು ಚಾಲ್ತಿಗೆ ಬರುವ ಪ್ರಯತ್ನ ನಡೆಸಿದ್ದಾರೆ. ಪ್ರಜ್ಞೆ ಇಲ್ಲದವರ ತರ್ಕವಿಲ್ಲದ ಮಾತುಗಳಿಗೆ ಉತ್ತರ ನೀಡುವುದು ಸಮಯ ವ್ಯರ್ಥವೇ ಸರಿ, ಆದರೆ ಸಚಿವನಾಗಿ ಕುತರ್ಕಗಳಿಗೂ ಉತ್ತರಿಸುವುದು ನನ್ನ ಜವಾಬ್ದಾರಿಯಾಗಿದೆ ಎಂದಿದ್ದಾರೆ.



ಬಿಜೆಪಿ ಕಚೇರಿಯ ಮೂಲೆಯಲ್ಲಿ ಗುಜರಿಯ ತೂಕಕ್ಕೆ ಹಾಕಲು ಇಟ್ಟಿದ್ದ ಯಾವುದೋ ಪೇಪರ್ ಬಂಡಲ್ ನ್ನು ಮುಂದೆ ಇಟ್ಟುಕೊಂಡು ತರ್ಕವಿಲ್ಲದ, ಹುರುಳಿಲ್ಲದ, ಮತ್ತು ಸತ್ಯಾಂಶವಿಲ್ಲದ ಆರೋಪಗಳನ್ನು ಮಾಡಿದ್ದಾರೆ. ಗುಡ್ಡ ಅಗೆಯುವವರಿಗೆ ಇಲಿಯನ್ನಾದರೂ ಹಿಡಿಯುವ ಗುರಿ ಇರಬೇಕು, ಇವರಿಗೆ ಜಿರಳೆ ಹಿಡಿಯಲೂ ಸಾಧ್ಯವಾಗಲಿಲ್ಲ ಎಂದು ಟಾಂಗ್ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!