ವಿಟ್ಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ
ವಿಟ್ಲ: ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ದಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು ನಗದು ಸಹಿತ 8 ಕೋಳಿಗಳನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲಮುಡ್ನೂರು ಗ್ರಾಮದಲ್ಲಿ ನಡೆದಿದೆ.

ಜ.25ರಂದು ವಿಟ್ಲ ಮುತ್ತೂರು ಗ್ರಾಮದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ ಠಾಣಾ ಪೊಲೀಸರಿಗೆ ಬಂದ ಖಚಿತ ವರ್ತಮಾನದ ಮೇರೆಗೆ ದಾಳಿ ನಡೆದಿದೆ.
ಈ ವೇಳೆ ಅಲ್ಲಿದ್ದವರ ಪೈಕಿ ಮಹೇಶ್, ಬಾಬು, ಆನಂದ ಹಾಗೂ ಅಣ್ಣು ರವರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದವರು ಪರಾರಿಯಾಗಿದ್ದಾರೆ. ಆಟಕ್ಕೆ ಬಳಸಿದ್ದ 4390 ರೂಪಾಯಿ ನಗದು, ರೂ. 4550 ಮೌಲ್ಯದ 8 ಹುಂಜಗಳು, 10 ಕೋಳಿ ಬಾಳುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




