ಅಂತಾರಾಷ್ಟ್ರೀಯ

ಭಾರತದ ಮೇಲಿನ ಸುಂಕ 18%ಗೆ ಇಳಿಕೆ- ಬೃಹತ್‌ ವ್ಯಾಪಾರ ಒಪ್ಪಂದ ಘೋಷಿಸಿದ ಟ್ರಂಪ್‌

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಬೃಹತ್‌ ವ್ಯಾಪಾರ ಒಪ್ಪಂದ ಘೋಷಣೆ ಮಾಡಿದ್ದಾರೆ. ಭಾರತದ ಮೇಲಿನ ಪ್ರತಿ ತೆರಿಗೆ ಭಾರವನ್ನ 25% ನಿಂದ 18% ಗೆ ಇಳಿಸಿರುವುದಾಗಿ ತಿಳಿಸಿದ್ದಾರೆ.




ಪ್ರಧಾನಿ ಮೋದಿ ಜೊತೆಗಿನ ಮಾತುಕತೆ ಬಳಿಕ ತನ್ನ ಸೋಷಿಯಲ್‌ ಮೀಡಿಯಾ ವೇದಿಕೆ ಟ್ರುತ್‌ ಸೋಷಿಯಲ್‌ನಲ್ಲಿ ಟ್ರಂಪ್‌ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಅಮೆರಿಕ ಭಾರತದ ಮೇಲಿನ ಸುಂಕವನ್ನ 25% ನಿಂದ 18% ಗೆ ಇಳಿಕೆ ಮಾಡಿದೆ. ವ್ಯಾಪಾರ ಒಪ್ಪಂದ, ರಷ್ಯಾ ಉಕ್ರೇನ್‌ ಯುದ್ಧ ಸೇರಿದಂತೆ ಹಲವಾರು ವಿಷಯಗಳನ್ನು ಚರ್ಚಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ರಂಪ್‌ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!