ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಮೂಲದ ಜಯಚಂದ್ರ (66) ಬಂಧಿತ ಆರೋಪಿ. ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆತನ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿತ್ತು. ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮತ್ತು ಕಂಕನಾಡಿ ನಗರ ಠಾಣೆಯ ನಿರೀಕ್ಷಕರ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕರ ನೇತೃತ್ವದಲ್ಲಿ ಸಿಬ್ಬಂದಿ ಬಾಲರಾಜ್, ರವಿಕುಮಾರ್ ಒಳಗೊಂಡ ಪೊಲೀಸರ ತಂಡ ಮಂಗಳವಾರ ಕೇರಳದ ಕೊಲ್ಲಂ ನಗರದ ವಟ್ಟಕುಟ್ಟುಲಲಿತಾ ಮಂದಿರಮ್ ಎಂಬಲ್ಲಿರುವ ಆರೋಪಿಯ ಮನೆಯಿಂದ ಜಯಚಂದ್ರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ




