ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ-ಸಹಸವಾರೆ ಸಾವು
ಮಂಗಳೂರು: ನಗರದ ನಂತೂರು ಪ್ರದೇಶದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸಹಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಬಲ್ಲಾಳ್‌ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟವರು. ದ್ವಿಚಕ್ರ ವಾಹನ ಸವಾರ ಕಿಶೋರ್ (32) ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನವು ಬಲ್ಲಾಳ್‌ಬಾಗ್ ಕಡೆಯಿಂದ ವಾಮಂಜೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಬಸ್ ನಿಲ್ದಾಣದ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸಹಸವಾರೆ ದೀಪ್ತಿ ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ ಮುಂದೆ ತಳ್ಳಲ್ಪಟ್ಟಿದ್ದು, ಬಸ್‌ನ ಟಯರ್ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಕೂಡಲೇ ಎಜೆ ಆಸ್ಪತ್ರೆಗೆ ಕರೆದೊಯ್ದು ಅಷ್ಟರಲ್ಲಿ ಅವರು ಅಸುನೀಗಿದ್ದಾರೆ.




