ಪುತ್ತೂರು: ಗಾಂಜಾ ಸಾಗಾಟ ಪ್ರಕರಣ: ಮೂವರು ಆರೋಪಿಗಳ ಬಂಧನ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜ.19ರಂದು 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಒರಿಸ್ಸಾ ರಾಜ್ಯದ ದೀಪಕ್ ಪಾತ್ರ (37) ಎಂದು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಿಗೆ ಮಾದಕವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ರಾಜ್ಯದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದಲ್ಲಿ, ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಆತನಿಂದ ರೂ 80,000 ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ರವರು ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ರವರುಗಳನ್ನು ಒಳಗೊಂಡ ತಂಡ ಭಾಗಿಯಾಗಿದ್ದಾರೆ.





