ವಿಟ್ಲ : ಬೈಕ್ ಡಿಕ್ಕಿ- ಮಹಿಳೆ ಮೃತ್ಯು
ವಿಟ್ಲ: ಪುತ್ತೂರು ಕಡೆಯಿಂದ ಬರುತ್ತಿದ್ದ ಬೈಕ್ ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್ಸ್ಟ್ಯಾಂಡ್ ಸಮೀಪ ಸಂಭವಿಸಿದೆ.

ಡಿಕ್ಕಿಯಿಂದ ಗಾಯಗೊಂಡ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ. ತೀವ್ರ ಗಾಯಗಳಿಂದಾಗಿ ಅವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





