ಕರಾವಳಿಕ್ರೈಂ

ಬೆಳ್ತಂಗಡಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಅಪಹರಣ ಯತ್ನ


ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಫೆ.9ರಂದು ಬೆಳಿಗ್ಗೆ ಸುಮಾರು 8.30ರ ವೇಳೆ 16 ವರ್ಷದ  ಬಾಲಕಿ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ವ್ಯಕ್ತಿಗಳು ಬಾಲಕಿಯನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದು ಈ ವೇಳೆ ಆಕೆ ಪ್ರತಿರೋಧಿಸಿದಾಗ, ಅವರು ಚಾಕುವಿನಿಂದ ಅವಳ ಎಡ ಕೈಗೆ  ಇರಿದಿದ್ದಾರೆ.

ಗಾಯಗಳು ಮೇಲ್ಮೈಯಾಗಿದ್ದು, ಹೊಲಿಗೆ ಹಾಕಿರುವುದಿಲ್ಲ.  ಈ ಬಗ್ಗೆ ಬಾಲಕಿಯು ತನ್ನ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!