ಕರಾವಳಿ

ಬೆಳ್ತಂಗಡಿ: ವಿದ್ಯಾರ್ಥಿನಿಯ ಅಪಹರಣ ಪ್ರಕರಣ ಬೇಧಿಸಿದ ಪೊಲೀಸರು

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ ಎಂದು ತಿಳಿಸಲಾಗಿದೆ. ನಂತರ ಬಾಲಕಿಯ ಹೇಳಿಕೆಯನ್ನು ಮತ್ತೊಮ್ಮೆ ದಾಖಲಿಸಲಾಗಿದ್ದು, ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ತಿಳಿಸಿರುವುದಾಗಿದೆ.
ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು.
ಅಪ್ರಾಪ್ತೆಗೆ ಚಲಾಯಿಸಲು ವಾಹನ ನೀಡಿರುವ  ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!