ಹಾರಾಡಿ ರೈಲ್ವೇ ಮೇಲ್ಸೇತುವೆ ನಿರ್ಮಾಣ: 8 ಕೋಟಿ ಅನುದಾನ ಮಂಜೂರು ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಪಥವಾಗಿ ಅಭಿವೃದ್ದಿ ಹೊಂದುತ್ತಿದ್ದು ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದ್ದು,ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಹಾರಾಡಿಯಲ್ಲಿ ಕಿರಿದಾದ ರೈಲ್ವೇ ಸೇತುವೆಯು ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣಮಾಡುವ ಬಗ್ಗೆ ಅನುದಾನ ಕೋರಿ ಶಾಸಕರು ಮನವಿ ಮಾಡಿದ್ದರು. ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಅನುದಾನ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿಯೂ ಪ್ರಾರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.





