ಕ್ರೈಂರಾಜ್ಯ

ಭೀಕರ ಸರಣಿ ಅಪಘಾತ: ಏಳು ಮಂದಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು(ಫೆ.13) ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ  ನಡುವೆ ಸರಣಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!