ರಾಷ್ಟ್ರೀಯ

ಗುಜರಾತ್ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಪೊಲೀಸ್ ವಶಕ್ಕೆ



ನವದೆಹಲಿ: ಮಹಿಳೆಯರ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಗುಜರಾತ್ ಆಮ್ ಆದ್ಮಿ ಪಕ್ಷದ ಸಂಚಾಲಕ ಗೋಪಾಲ್ ಇಟಾಲಿಯಾ ಅವರನ್ನು ಗುರುವಾರ ಮಧ್ಯಾಹ್ನ ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಗೋಪಾಲ್ ಇಂದು ಬೆಳಿಗ್ಗೆ ವಿಚಾರಣೆಗೆ ಹಾಜರಾಗಿದ್ದರು. ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರ ಆದೇಶದ ಮೇಲೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಧೀಶರ ಮುಂದೆ ಗೋಪಾಲ್ ಅವರನ್ನು ಹಾಜರುಪಡಿಸಿ ಬಂಧನಕ್ಕೆ ಒಳಪಡಿಸಬಹುದು ಎನ್ನಲಾಗಿದೆ. ಸುದ್ದಿ ತಿಳಿದು ನೂರಾರು ಎಎಪಿ ಕಾರ್ಯಕರ್ತರು ಆಯೋಗದ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗೆ ಗೋಪಾಲ್ ಅವರು ನರೇಂದ್ರ ಮೋದಿ ಅವರನ್ನು ನೀಚ ರಾಜಕಾರಣಿ ಎಂದು ಜರಿದಿದ್ದರು ಹಾಗೂ ಮಹಿಳೆಯರು ದೇವಸ್ಥಾನಕ್ಕೆ ಹೋಗಬಾರದು ಎಂದು ಹೇಳಿದ್ದ ವಿಡಿಯೊಗಳು ವೈರಲ್ ಆಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಹಿಳಾ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!