ಕರಾವಳಿರಾಜ್ಯ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರು ನಗರದಿಂದ ಮಾದಕ ವಸ್ತು  ಖರೀದಿಸಿ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ

ಮಂಗಳೂರು: ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಖರೀದಿಸಿ ಅದನ್ನು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.



ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಫೆ. 12 ರಂದು ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ, ಆರೋಪಿಗಳಾದ ಉಳ್ಳಾಲ, ಗಣೇಶ್ ಬೀಡಿ ವರ್ಕ್ಸ್ ಹತ್ತಿರದ ಬಸ್ತಿಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ(34), ಉಳ್ಳಾಲ, ಕೋಡಿ, ಡಿ ರೋಡ್ ನಿವಾಸಿ ಮೈಯದ್ದಿ(28), ಉಳ್ಳಾಲದ ಮುಕ್ಕಚೇರಿ, ಮೊಹಮ್ಮದ್ ಕಂಪೌಂಡು ನಿವಾಸಿ ಮೊಹಮ್ಮದ್ ಶಿಫಾನ್(28) ಅವರನ್ನು ಬಂಧಿಸಿದ್ದಾರೆ.



11,90,000 ರೂ. ಮೌಲ್ಯದ 118.13 ಗ್ರಾಂ ತೂಕದ ಎಂಡಿಎಂಎ, ಮೊಬೈಲ್ ಫೋನ್-4, ಸ್ವೀಪ್ಟ್ ಕಾರು ಸಹಿತ ಒಟ್ಟು 17,95,000 ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.


ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!