ಕಡಬ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಫೆ.10ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ರ ಗ್ರಾಮದ ಗಾನದ ಕೊಟ್ಯದಲ್ಲಿ ಅಕ್ರಮ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಸದ್ರಿ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಕೋಳಿಗಳ ಕಾಲಿಗೆ ಬಾಳು ಕಟ್ಟಿ, ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿದ್ದು ಪೊಲೀಸರನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ. ಈ ಸಂಬಂಧ ಉಮೇಶಗೌಡ ಬಂಟ್ರ ಗ್ರಾಮ ಮತ್ತು ವಿನಯ ಸಿ ಐತ್ತೂರು ಗ್ರಾಮ ಹಾಗೂ ಇತರರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.16/2026 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87, 93 ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಕಲಂ 3, 11ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




