ಕರಾವಳಿಕ್ರೈಂ

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ: ಷರತ್ತು ಉಲ್ಲಂಘಿಸಿದ ಹಿನ್ನೆಲೆ ಮತ್ತೊಂದು ಪ್ರಕರಣ ದಾಖಲು



ಪುತ್ತೂರು: ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ದ ಷರತ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.



ಮೂಲತಃ ಪುತ್ತೂರು ಕಸಬ ನಿವಾಸಿ, ಪ್ರಸಕ್ತ ಮಂಗಳೂರಿನ ಪದವಿನಲ್ಲಿ ವಾಸ್ತವ್ಯ ಇರುವ ಅಬ್ಬಾಸ್ ಆಲಿ ಅಲ್ತಾಫ್ (55) ಬಂಧಿತ ಆರೋಪಿ. 2012ರಲ್ಲಿ ನಡೆದ ಎರಡು ಪ್ರಕರಣಗಳಿಗೆ ಸಂಬಂಧಿಸಿ ಆರೋಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆರೋಪಿ ವಿರುದ್ಧ ವಾರಂಟ್ ಜಾರಿಯಾಗಿತ್ತು. ಆರೋಪಿಯನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ ಪೊಲೀಸರು ಮಂಗಳೂರು ಕುಲಶೇಖರ ಬಿಕರ್ನಕಟ್ಟೆ ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಷರತ್ತು ಬದ್ದ ಜಾಮೀನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 269 ಬಿಎನ್ ಎಸ್ 2023ರಂತೆ ಮತ್ತೊಂದು ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!