ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಅಂತಾರಾಷ್ಟ್ರೀಯ ರಾಯಭಾರಿಯಾಗಿ ಅಕಿಬ್ ಜಾವಿದ್ ಕೂಟಲ್ ನೇಮಕ

ಪುತ್ತೂರು: ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನ ಕರ್ನಾಟಕ ಇದರ ಅಂತಾರಾಷ್ಟ್ರೀಯ ರಾಯಭಾರಿಯಾಗಿ ಅನಿವಾಸಿ ಭಾರತೀಯ ಅಕಿಬ್ ಜಾವಿದ್ ಕೂಟಲ್ ನೇಮಕಗೊಂಡಿದ್ದಾರೆ.

ಫೆ.11ರಂದು ಮಂಗಳೂರು ಪುರಭವನದಲ್ಲಿ ನಡೆದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯ ಸಮಾವೇಶದಲ್ಲಿ ಅವರಿಗೆ ನೇಮಕಾತಿ ಪತ್ರ ಹಸ್ತಾಂತರಿಸಲಾಯಿತು.
ಇದೇ ಸಂದರ್ಭದಲ್ಲಿ ಅಕಿಬ್ ಜಾವಿದ್ ಕೂಟಲ್ ಅವರಿಗೆ ‘ಕನ್ನಡ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.





