ಕರಾವಳಿಕ್ರೈಂ

ಉಪ್ಪಿನಂಗಡಿ ಮಾದಕ ದ್ರವ್ಯ ಸೇವನೆ: ಆರೋಪಿಯ ಬಂಧನ



ಉಪ್ಪಿನಂಗಡಿ: ಸಿಗರೇಟು ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಜತ್ತೂರು ಗ್ರಾಮದ ಕಾಂಚನದ ಮುಕೈ ಎಂಬಲ್ಲಿ ಬಂಧಿಸಿದ್ದಾರೆ.


ವಿಟ್ಲ ಪಡೂರು ಗ್ರಾಮದ ಮುಹಮ್ಮದ್ ಮೋಹಾದ್ ಎಸ್. (33) ಬಂಧಿತ ಆರೋಪಿ. ಈತ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಸುರೇಶ್ ಸಿ.ಟಿ. ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ. ಈತ ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್ ಸೇದಿರುವುದೆಂದು ತಿಳಿದು ಬಂದಿರುತ್ತದೆ. ನಂತರ ಸದ್ರಿ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!