ಸುಬ್ರಹ್ಮಣ್ಯ: ಅಕ್ರಮ ಮರಳುಗಾರಿಕೆಗೆ ಪೊಲೀಸ್ ದಾಳಿ-ಸೊತ್ತು ವಶ
ಸುಬ್ರಹ್ಮಣ್ಯ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಐನೆಕಿದು ಗ್ರಾಮದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಎಸೈ ಆಂಜನೇಯ ರೆಡ್ಡಿ ಕರ್ತವ್ಯದಲ್ಲಿದ್ದ ಸಂದರ್ಭ ಕಡಬ ತಾಲೂಕಿನ ಐನೆಕಿದು ಗ್ರಾಮದ ಕಲ್ಲಾಜೆ ಎಂಬಲ್ಲಿ ಹೊಳೆಯಲ್ಲಿ ಅಕ್ರಮವಾಗಿ ಇಟಾಚಿ ವಾಹನ ಬಳಿಸಿ ಮರಳು ತೆಗೆಯುತ್ತಿರುವ ಖಚಿತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಸ್ಥಳದಿಂದ ಆರೋಪಿಗಳು ಪರಾರಿಯಾಗಿದ್ದು, ಅಂದಾಜು 10 ಲಕ್ಷ ರೂ. ಮೌಲ್ಯದ ಇಟಾಚಿ, ಅಂದಾಜು ಮೌಲ್ಯ 5 ಲಕ್ಷ ರೂ. ಮೌಲ್ಯದ ಟಿಪ್ಪರ್, 50,000 ರೂ. ಮೌಲ್ಯದ 50 ಟನ್ ಮರಳುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





