ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ!
ಗದಗ: ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ನಡೆದಿದೆ.

ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳು ಕೂಡಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸದ್ಯ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಮಗಾರಿ ಯೋಚನೆಗಾಗಿ ಗುತ್ತಿಗೆದಾರನಿಂದ 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಅದರಂತೆ ಮುಂಗಡವಾಗಿ 5 ಲಕ್ಷ ರೂಪಾಯಿ ಕಮಿಷನ್ ಪಡೆಯುವಾಗ ಶಾಸಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.




