ಕರಾವಳಿಕ್ರೈಂ

ಲೂಡೊ ಕಾಯಿನ್ ನುಂಗಿ ಬಾಲಕಿ ಮೃತ್ಯು



ಮಂಗಳೂರು: ಲೂಡೊ ಆಡುತ್ತಿದ್ದ ಬಾಲಕಿಯೊಬ್ಬಳು ಕೋನ್ ಆಕಾರದ ಪ್ಲಾಸ್ಟಿಕ್ ಕಾಯಿನ್ ನುಂಗಿದ ಪರಿಣಾಮ ಉಸಿರುಗಟ್ಟಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ. ಮೂಲತು ಕಾಸರಗೋಡು ಜಿಲ್ಲೆಯ ಮಧೂರು ಉಳಿಯತ್ತಡ್ಕದ ರಾಜೇಶ್ ಗಟ್ಟಿ-ರಾಜೇಶ್ವರಿ ದಂಪತಿಯ ಪುತ್ರಿ ತನುಷ್ಠಾ(8) ಮೃತ ಬಾಲಕಿ.



ಬಾಲಕಿ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳು. ಈ ವೇಳೆ ಬಾಲಕಿ ಲೂಡೊ ಆಟದ ಪ್ಲಾಸ್ಟಿಕ್ ಕಾಯಿನ್ ನುಂಗಿ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದಳು. ಇದರಿಂದ ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.



ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಕಾಯಿನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!