ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ
ವಿಟ್ಲ: ಕೊಡಂಗಾಯಿ ಬಳಿಯ ಮೂರುಕಜೆ ಎಂಬಲ್ಲಿನ ವಿದ್ಯಾಸಂಸ್ಥೆಯ 10 ನೇ ತರಗತಿಯ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿನಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬವರು ನಿನ್ನೆಯಿಂದ ನಾಪತ್ತೆಯಾಗಿದ್ದು ಹುಡುಕಾಟ ನಡೆಸಿದಾಗ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ.
ವಿಟ್ಲ ಠಾಣಾ ಪೊಲೀಸರು ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಫ್ರೆಂಡ್ಸ್ ವಿಟ್ಲ ದ ಮುರಳೀಧರರವರ ತಂಡ ಮೇಲಕ್ಕೆತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.




