ಇರಾನ್ ಮೇಲೆ ಇಸ್ರೇಲ್ ಭೀಕರ ಕ್ಷಿಪಣಿ ದಾಳಿ
ಟೆಹ್ರಾನ್: ಇರಾನ್ ಮೇಲೆ ಇಸ್ರೇಲ್ ದಾಳಿ ಮಾಡಿದ್ದು, ರಾಜಧಾನಿ ಟೆಹ್ರಾನ್ ಮೇಲೆ ಶನಿವಾರ ಭೀಕರ ಕ್ಷಿಪಣಿ ದಾಳಿ ಆರಂಭಿಸಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾಗಿದ್ದು, ಇರಾನ್ ರಾಜಧಾನಿ ಟೆಹರಾನ್ ನಗರದ ಮೇಲೆ ಇಸ್ರೇಲ್ ಸೇನೆ ಕ್ಷಿಪಣಿ ದಾಳಿ ನಡೆಸಿದೆ.

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಭವನ ಗುರಿಯಾಗಿಸಿ ಈ ದಾಳಿ ನಡೆದಿದ್ದು, ಟೆಹರಾನ್ನ ಹಲವೆಡೆ ಭಾರಿ ಸದ್ದಿನೊಂದಿಗೆ ಸರಣಿ ಸ್ಫೋಟ ಸಂಭವಿಸಿವೆ. ಕ್ಷಿಪಣಿ ದಾಳಿ, ಸರಣಿ ಸ್ಫೋಟದಿಂದ ಇರಾನ್ ಜನತೆ ತತ್ತರಿಸಿದ್ದಾರೆ. ಇರಾನ್ ಸೇನೆ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಇಸ್ರೇಲ್ ತುರ್ತು ಪರಿಸ್ಥಿತಿ ಘೋಷಿಸಿದೆ.





