ಅಮೇರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಮೃತ್ಯು
ವಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲ ಅಲಿ ಖಮೇನಿ ಅವರನ್ನ ಹತ್ಯೆ ಮಾಡಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಇರಾನ್ ಮಾಧ್ಯಮ ಕೂಡ ಹತ್ಯೆಯನ್ನ ದೃಢಪಡಿಸಿದೆ.

ಇಸ್ಲಾಮಿಕ್ ಗಣರಾಜ್ಯದ ಮೇಲೆ ಅಮೆರಿಕ-ಇಸ್ರೇಲಿ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸ್ಟೇಟ್ಸ್ ಮೀಡಿಯಾ ಖಚಿತಪಡಿಸಿದೆ. ಈ ಬೆಳವಣಿಗೆ ಬಳಿಕ ಇರಾನ್ ದೇಶಾದ್ಯಂತ 40 ದಿನಗಳ ಶೋಕಾಚರಣೆ ಘೋಷಿಸಿದೆ.





