ರಾಜ್ಯ

ಗೃಹ ಸಚಿವರು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ-ಶಾಸಕ ಹರೀಶ್ ಪೂಂಜಾ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಳಿಗೆ ಯತ್ನಿಸಿದ ಘಟನೆ ನಿನ್ನೆ ತಡರಾತ್ರಿ ಫರಂಗಿಪೇಟೆ ಬಳಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕರು, ನನ್ನ ಮೇಲೆ ದಾಳಿ ನಡೆದಿದ್ದು ಹೌದು, ಗೃಹ ಸಚಿವರು ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.


ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಗುರುವಾರ ಬೆಂಗಳೂರಿನಿಂದ ರಾತ್ರಿ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ಸಂದರ್ಭ ಸ್ಕಾರ್ಪಿಯೊ ವಾಹನ ಓವರ್ ಟೇಕ್ ಮಾಡಿ ನಾನು ಇದ್ದ ಕಾರಿಗೆ ಎರಡು ಬಾರಿ ತಲ್ವಾರ್ ದಾಳಿ ಮಾಡಲಾಗಿದೆ.


ಗೃಹ ಸಚಿವರು ಬೆಳಗ್ಗೆ 2 ಬಾರಿ ಕರೆ ಮಾಡಿದ್ದು, ಈ ಬಗ್ಗೆ ಸಮಗ್ರ ತನಿಖೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿ, ನನಗೆ ಅಂಗರಕ್ಷಕರನ್ನು ನೀಡಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!