ಉಪ್ಪಿನಂಗಡಿ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ಪ್ರಕರಣವೊಂದರ ಆರೋಪಿಯಾಗಿರುವ ಕಡಬ ನಿವಾಸಿ
ವಿನೋದ್ @ ಜಾರ್ಜ್ ಕುಟ್ಟಿ ಸೆಬಾಸ್ಟಿಯನ್ 6 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆರೋಪಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ HC- 826 ನೇ ಶಿವರಾಮ ರೈ, PC_ 765ನೇ ಸ೦ತೋಷ್ ಕೆ.ಸಿ ರವರು ಮಾ.05ರಂದು ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಎಂಬಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.




