ವಿಟ್ಲ: ಎಂಡಿಎಂಎ ಸಹಿತ ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಮ್.ಡಿ.ಎಮ್.ಎ ಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ರವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿಯು ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್ ಅಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.




