ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರು ಹಿಂಬಾಲಿಸಿ ತಲ್ವಾರ್ ದಾಳಿಗೆ ಯತ್ನಿಸಿದ ಪ್ರಕರಣ: ಆರೋಪಿ ಬಂಧನ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರು ಹಿಂಬಾಲಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು, ಫಳ್ನೀರ್ ನಿವಾಸಿ ರಿಯಾಜ್ ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಭಾಗಿಯಾಗಿತ್ತು ಎನ್ನಲಾದ ಸ್ಕಾರ್ಪಿಯೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ದೂರುದಾರರಾದ ಶಾಸಕರ ಚಾಲಕ ನವೀನ್ ಅವರು ಆರೋಪಿ ಮತ್ತು ವಾಹನವನ್ನು ಗುರುತಿಸಿದ್ದಾರೆ. ಓವರ್ ಟೇಕ್ ವಿಚಾರವಾಗಿ ಗೊಂದಲ ನಿರ್ಮಾಣವಾಗಿದೆ.
ಅಲ್ಲದೇ ಆರೋಪಿಯ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಮತ್ತು ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.