ಕರಾವಳಿ

ಸುಳ್ಯ: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ, ಸಮುದಾಯ ಸೇವೆಯ ಶಿಕ್ಷೆ ವಿಧಿಸಿದ ನ್ಯಾಯಾಲಯ

ಸುಳ್ಯ: ನಗರದಲ್ಲಿ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ದ ಐ.ಎಂ.ವಿ. ಕಾನೂನಿನಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಸಮುದಾಯ ಸೇವೆ ಶಿಕ್ಷೆ ವಿಧಿಸಿದ ಘಟನೆ ನಡೆದಿದೆ.


ಸುಳ್ಯ ನಿವಾಸಿ ರಕ್ಷಿತ್ ಜಿ. ಎಂಬಾತ ಪದೇ ಪದೇ ನಿಯಮ ಉಲ್ಲಂಘನೆ ಮಾಡುತ್ತಿರುವ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುಳ್ಯ ಜೆಎಮ್‌ಎಫ್‌ಸಿ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗೆ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಒಟ್ಟು ಮೂರು ಸಾವಿರ ರೂ. ದಂಡ ಹಾಗೂ ಮೂರು ಪ್ರಕರಣಗಳಲ್ಲಿ ತಲಾ ಐದು ದಿನಗಳಂತೆ ಮಾ.15ರಿಂದ ಮಾ.29 ರವರೆಗೆ ಒಟ್ಟು 15 ದಿನಗಳ ಕಾಲ ಸಮುದಾಯ ಸೇವೆಯನ್ನು ನಿರ್ವಹಿಸುವಂತೆ ಹಾಗೂ ಸಂಚಾರ ನಿಯಮಗಳನ್ನು ಒಳಗೊಂಡ ಫಲಕಗಳನ್ನು ಹಿಡಿದು ಸುಳ್ಯ ಪೇಟೆಯ ಜಂಕ್ಷನ್‌ಗಳಲ್ಲಿ ನಿಂತು ಸಾರ್ವಜನಿಕರಿಗೆ ಸಂಚಾರ ನಿಯಮ ಪಾಲನೆಯ ಅರಿವನ್ನು ಮೂಡಿಸುವಂತೆ ಆದೇಶಿಸಿದೆ. ಜೊತೆಗೆ ಆರೋಪಿಯ ಚಾಲನಾ ಪರವಾನಿಗೆಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿಡಲು ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!