ಈಡನ್ ಗ್ಲೋಬಲ್ ಸ್ಕೂಲ್ನ ಕಾರ್ಯದರ್ಶಿ ಬಶೀರ್ ಹಾಜಿ ಅವರಿಗೆ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ
ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಸ್ಕೂಲ್ನ ಕಾರ್ಯದರ್ಶಿ ಬಶೀರ್ ಹಾಜಿ ಅವರಿಗೆ ಶೈಕ್ಷಣಿಕ ಸೇವಾ ಸಾಧಕ ಪ್ರಶಸ್ತಿ ಲಭಿಸಿದೆ.

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ದ.ಕ, ಪುತ್ತೂರು/ಕಡಬ ತಾಲೂಕು ಘಟಕಗಳ ಆಶ್ರಯದಲ್ಲಿ ಮಾ.15ರಂದು ಪುತ್ತೂರು ಬಂಟರ ಭವನದಲ್ಲಿ ನಡೆದ ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸ್ಪೀಕರ್ ಯು.ಟಿ ಖಾದರ್, ಶಾಸಕ ಅಶೋಕ್ ರೈ, ವಿಧಾನ ಪರಿಷತ್ ಸದಸ್ಯ ಕಿಶೋರ್ ಬೊಟ್ಯಾಡಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು. 7 ಮಂದಿಗೆ ವಿದ್ಯಾರತ್ನ ಪ್ರಶಸ್ತಿ, 7 ಮಂದಿಗೆ ಸೇವಾಭೂಷಣ ಪ್ರಶಸ್ತಿ, 16 ಮಂದಿಗೆ ಶೈಕ್ಷಣಿಕ ಸೇವಾ ಪ್ರಶಸ್ತಿ ಹಾಗೂ 10 ಮಂದಿಗೆ ಶಿಕ್ಷಣ ರತ್ನ ಪ್ರಶಸ್ತಿ ನೀಡಲಾಯಿತು.





