ರಾಜ್ಯ

ಬೆಂಗಳೂರು: ಇನ್ಮುಂದೆ ರಾತ್ರಿ 1 ಗಂಟೆವರೆಗೂ ಹೋಟೆಲ್ ವ್ಯವಹಾರಕ್ಕೆ ಅವಕಾಶ



ಬೆಂಗಳೂರು: ತಿಂಡಿ–ತಿನಿಸು ಮಾರುವ ಅಂಗಡಿಗಳು ಹಾಗೂ ಹೋಟೆಲ್‌ಗಳ ವಹಿವಾಟು ಅವಧಿಯನ್ನು ರಾತ್ರಿ 1 ಗಂಟೆಯವರೆಗೂ ವಿಸ್ತರಿಸಲಾಗಿದ್ದು, ಈ ಸಂಬಂಧ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸಾಂಧರ್ಭಿಕ ಚಿತ್ರ

‘ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ತಿಂಡಿ–ತಿನಿಸು ಒದಗಿಸುವ ಸ್ಥಳಗಳ ವ್ಯಾಪಾರದ ಅವಧಿಯನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ’ ಎಂದು ಕಮಿಷನರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

‘ಎಲ್ಲ ವಿಭಾಗಗಳ ಡಿಸಿಪಿಗಳು ತಮ್ಮ ಅಧೀನದ ಪೊಲೀಸರಿಗೆ ಆದೇಶದ ಬಗ್ಗೆ ತಿಳಿಸಬೇಕು. ಆದೇಶದನ್ವಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು’ ಎಂದು ಹೇಳಿದ್ದಾರೆ.

‘ಸರ್ಕಾರದ ಆದೇಶದಂತೆ ರಾತ್ರಿ 1 ಗಂಟೆಯವರೆಗೂ ವ್ಯಾಪಾರ–ವಹಿವಾಟು ನಡೆಸಲು ಅವಕಾಶವಿದೆ. ಅಷ್ಟಾದರೂ ಪೊಲೀಸರು ರಾತ್ರಿ 11 ಗಂಟೆಗೆ ಹೋಟೆಲ್‌ಗಳನ್ನು ಬಂದ್ ಮಾಡಿಸುತ್ತಿದ್ದಾರೆ ಎಂಬುದಾಗಿ ಹೋಟೆಲ್‌ಗಳ ಮಾಲೀಕರ ಸಂಘದ ಅಧ್ಯಕ್ಷರು ದೂರು ನೀಡಿದ್ದರು. ಇದನ್ನು ಪರಿಶೀಲಿಸಿ ಹೊಸ ಜ್ಞಾಪನಾ ಆದೇಶ ಹೊರಡಿಸಲಾಗಿದೆ’ ಎಂದು ಕಮಿಷನರ್ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!