ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಓರ್ವ ಆರೋಪಿಗೆ ಜಾಮೀನು
ಸುಳ್ಯ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಚ್.ವೈ. ಎಂಬಾತನಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ.

2022ರ ಜು.26ರಂದು ಪ್ರವೀಣ್ ನೆಟ್ಟಾರ್ ಅವರನ್ನು ಆರೋಪಿಗಳು ಕೊಲೆಗೈದಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 26 ಮಂದಿಯನ್ನು ಎನ್‌ಐಎ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣದ 26ನೇ ಆರೋಪಿಯಾಗಿರುವ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.



