ಕ್ರೈಂರಾಷ್ಟ್ರೀಯ

ಟಿಪ್ಪರ್ ಟ್ರಕ್ ಢಿಕ್ಕಿ ಹೊಡೆದು ಖಾಸಗಿ ಬಸ್ ಬೆಂಕಿಗಾಹುತಿ; 10 ಮಂದಿ ಸಜೀವ ದಹನ

ಟಿಪ್ಪರ್ ಟ್ರಕ್ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಬೆಂಕಿಗೆ ಆಹುತಿಯಾಗಿ 10 ಮಂದಿ ಸಜೀವ ದಹನವಾದ ಘಟನೆ ಆಂಧ್ರದ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದಿದೆ.

ಹೈದರಾಬಾದ್‌ನಿಂದ ಪಾಮೂರ್‌ಗೆ ಹೋಗುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಬಸ್ ಇದ್ದಕ್ಕಿದ್ದಂತೆ ಬೆಂಕಿಗೆ ಆಹುತಿಯಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಈ ವೇಳೆ ಬಸ್‌ನೊಳಗಿದ್ದ 10 ಜನರು ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಇನ್ನುಳಿದವರನ್ನು ರಕ್ಷಿಸಲಾಗಿದ್ದು, ತೀವ್ರವಾಗಿ ಗಾಯಗಳಾಗಿರುವ 18 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಮಾರ್ಕಪುರಂ ಜಿಲ್ಲೆಯ ರಾಯವರಂ ಬಳಿಯ ಹಲಗೆ ಕ್ವಾರಿಗಳ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ 10 ಮಂದಿ ಸಾವನ್ನಪ್ಪಿದ್ದು, 18 ಜನರನ್ನು ಗಂಭೀರ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಆದರೆ ವಾಹನಗಳು ನಿಯಂತ್ರಣಕ್ಕೆ ಬರುವ ಮೊದಲೇ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!