ಕರಾವಳಿಕ್ರೈಂ

ಮಂಗಳೂರು: ತೊಕ್ಕೊಟ್ಟಿನಲ್ಲಿ  ಮಾರಕಾಸ್ತ್ರಗಳಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಮಂಗಳೂರು: ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಿರುವ ಘಟನೆ ತೊಕ್ಕೊಟ್ಟು ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆರಿಫ್‌ (46) ಎಂದು ಗುರುತಿಸಲಾಗಿದೆ.


ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ ಆರಿಫ್ ರನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!