ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಗೌರವ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಘಟಿಕೋತ್ಸವ ಕಾರ್ಯಕ್ರಮವು ಮಾ.28ರಂದು ಮಂಗಳ ಗಂಗೋತ್ರಿಯ ಸಭಾಂಗಣದಲ್ಲಿ ನಡೆಯಲಿದೆ.

ಈ ಸಮಯದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನದ ಮೇರು ಸಾಧಕ ಸೂರಿಕುಮೇರು ಗೋವಿಂದ ಭಟ್ (ಮರಣೋತ್ತರ) ಮತ್ತು ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.



