ರಾಜಕೀಯರಾಜ್ಯ

ದಾವಣಗೆರೆ: ಚುನಾವಣಾ ಕಣದಿಂದ ಹಿಂದೆ ಸರಿದ ಪಕ್ಷೇತರ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ನಿನ್ನೆ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಎಲ್ಲರಿಗೂ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ.


ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ. ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು. ದಾವಣಗೆರೆಯಲ್ಲಿ  70 ಸಾವಿರ ಮುಸ್ಲಿಂ ಮತದಾರರಿದ್ದು, ಸಮುದಾಯದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!