ಕರಾವಳಿಕ್ರೈಂ

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ 20 ಜಾನುವಾರುಗಳ ರಕ್ಷಣೆ, ಪ್ರಕರಣ ದಾಖಲು

ಕಡಬ: ಅಕ್ರಮ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಅದರ ಚಾಲಕನನ್ನು ಕಡಬ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಎ.3ರಂದು ಮುಂಜಾನೆ ನಡೆದಿದೆ.

ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದಾಗಿ ಕಡಬ ಠಾಣಾ ಎಸ್ ಐ ಜಂಬುರಾಜ್ ಮಹಾಜನ್ ರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿಗೆ ತೆರಳಿ ಕಂಟೇನರ್ ಲಾರಿಯನ್ನು ತಡೆದು ನಿಲ್ಲಿಸಿ ಪರಿಶೀಲಿಸಿದ್ದು ಈ ವೇಳೆ ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡು ಬಂದಿದೆ.

ಸದ್ರಿ ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಿದಾಗ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂಬುದಾಗಿ ತಿಳಿಸಿದ್ದಾನೆ. ಜಾನುವಾರುಗಳನ್ನು ಸಾಗಾಟ ಮಾಡಲು ಪರವಾನಿಗೆ ಬಗ್ಗೆ ವಿಚಾರಿಸಲಾಗಿ ಯಾವುದೇ ಪರವಾನಿಗೆ ಇರುವುದಿಲ್ಲ ಹಾಗೂ ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿರುತ್ತಾನೆ.‌ ಸದ್ರಿ ಲಾರಿ ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿ‌, ಈ ಬಗ್ಗೆ ಕಡಬ ಪೊಲೀಸ್‌‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!