ಕರಾವಳಿಕ್ರೈಂ

ಬಂಟ್ವಾಳ: ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಗಳ ಬಂಧನ

ಬಂಟ್ವಾಳ: ಮಾ.21ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಬಂಧಿತ ಆರೋಪಿಗಳು. ಇವರು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *

error: Content is protected !!