ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ
ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದಲ್ಲಿ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್ ಮೂಲದ ಬಾಲಕಿ ಶ್ರೀನಂದಾ (15) ಅವರ ಶವ ಪತ್ತೆಯಾಗಿದೆ. ಅರಿಶಿನಗುಪ್ಪಿಯಿಂದ 5 ಕಿ.ಮೀ ದೂರದ, ಸುಮಾರು 1500 ಅಡಿ ಪ್ರಪಾತದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿದೆ.

ಎ.7ರಂದು ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು. ಕುಟುಂಬದ ಸದಸ್ಯರೊಂದಿಗೆ ಹಂಪಿ ಪ್ರವಾಸ ಮುಗಿಸಿ ಇಲ್ಲಿಗೆ ಬಂದಿದ್ದ ಶ್ರೀನಂದಾ, ಜನದಟ್ಟಣೆಯ ನಡುವೆ ಹಠಾತ್ತನೆ ಕಾಣೆಯಾಗಿದ್ದರು ಎನ್ನಲಾಗಿದೆ. ಇದೀಗ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಬಾಲಕಿ ನಾಪತ್ತೆಯಾದ ವಿಚಾರ ಗೊತ್ತಾಗುತ್ತಿದ್ದಂತೆ ರಕ್ಷಣಾ ತಂಡಗಳು ಬಾಲಕಿ ಪತ್ತೆಗೆ ಹುಡುಕಾಟ ನಡೆಸಿದ್ದರು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸುಮಾರು 100ಕ್ಕೂ ಹೆಚ್ಚು ಸಿಬ್ಬಂದಿ ಹಲವು ತಂಡಗಳನ್ನಾಗಿ ಮಾಡಿಕೊಂಡು ಶೋಧಕಾರ್ಯಕ್ಕೆ ಇಳಿದಿತ್ತು.



