ಕರಾವಳಿಕ್ರೈಂ

ವಿಟ್ಲ: ಕೋಳಿ ಅಂಕದ ಮೇಲೆ ಪೊಲೀಸ್ ದಾಳಿ; ನಾಲ್ವರ ಬಂಧನ


ವಿಟ್ಲ: ಗ್ರಾಮದ ಮಾಡ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಏ.12ರಂದು ನಡೆದಿದೆ.


ವಿಟ್ಲ ಕಸಬ ಗ್ರಾಮದ ಮಾಡ ಎಂಬಲ್ಲಿ ಸುಮಾರು 20ರಿಂದ 25 ಜನರ ಗುಂಪು ಸೇರಿ ಕೋಳಿ ಅಂಕ ಜೂಜಾಟ ಆಡುತ್ತಿದ್ದಾರೆಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಪೊಲೀಸರನ್ನು ಕಂಡು ಸ್ಥಳದಲ್ಲಿದ್ದವರು ಓಡಲಾರಂಭಿಸಿದ್ದು, ಈ ಪೈಕಿ ನಾಲ್ವರನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಬಂಧಿತರನ್ನು ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ನೂರು ನಿವಾಸಿ ಚಂದ್ರಹಾಸ (32) ಎಂದು ಗುರುತಿಸಲಾಗಿದೆ.

ಪೊಲೀಸರು ಉಳಿದ ಆರೋಪಿಗಳನ್ನು ಬೆನ್ನಟ್ಟುತ್ತಿದ್ದಾಗ, ಆರೋಪಿಗಳಾದ ಬಾಬಣ್ಣ ಮತ್ತು ಹೊನ್ನಪ್ಪ ಎಂಬುವವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.
ದಾಳಿ ವೇಳೆ ಜೂಜಾಟಕ್ಕೆ ಬಳಸಲಾಗುತ್ತಿದ್ದ 3 ಕೋಳಿಗಳು, 1,000/- ರೂಪಾಯಿ ನಗದು ಮತ್ತು ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!