ಮಾಣಿ: ಯುವಕನ ಮೇಲೆ ಕಲ್ಲಿನಿಂದ ಹಲ್ಲೆ; ಆರೋಪಿ ಪೊಲೀಸ್ ವಶಕ್ಕೆ
ವಿಟ್ಲ: ಯುವಕನೋರ್ವನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಣಿ ನಿವಾಸಿ ವಿಶ್ವನಾಥ (28) ಎಂಬುವವರು ಏಪ್ರಿಲ್ 12ರಂದು ಸಂಜೆ ತಮ್ಮ ಮನೆಯಲ್ಲಿದ್ದಾಗ, ಅವರಿಗೆ ಪರಿಚಯವಿರುವ ಬರಿಮಾರು ನಿವಾಸಿ ಪಿ. ನವೀನ (43) ಎಂಬಾತ ಮನೆಗೆ ಬಂದಿದ್ದಾನೆ. ಸುಮಾರು ಒಂದು ವರ್ಷದ ಹಿಂದೆ ಇಬ್ಬರ ನಡುವೆ ನಡೆದಿದ್ದ ಗಲಾಟೆಯ ವಿಚಾರವನ್ನು ಪ್ರಸ್ತಾಪಿಸಿದ ನವೀನ, ವಿಶ್ವನಾಥ ಅವರೊಂದಿಗೆ ಜಗಳವಾಡಿದ್ದು ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೇ ಜೀವಬೆದರಿಕೆ ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯಿಂದಾಗಿ ಗಾಯಗೊಂಡ ವಿಶ್ವನಾಥ ಅವರನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಬಗ್ಗೆ ವಿಶ್ವನಾಥ ಅವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪಿ. ನವೀನನನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.



