ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲು
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದ್ದು ಮಸೂದೆಗಳ ಪರವಾಗಿ 298 ಸದಸ್ಯರು ಮತ ಚಲಾಯಿಸಿದ್ದರೆ, ಮಸೂದೆಗಳ ವಿರುದ್ಧವಾಗಿ 230 ಸದಸ್ಯರು ಮತ ಚಲಾಯಿಸಿದ್ದಾರೆ. ಒಟ್ಟಾರೆ 528 ಸದಸ್ಯರು ಮತ ಚಲಾಯಿಸಿದ್ದರು.

ಮಸೂದೆ ಅಂಗೀಕಾರಗೊಳ್ಳಲು 352 ಸದಸ್ಯರ ಬೆಂಬಲ ಅಗತ್ಯವಿತ್ತು, ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳು ಸೇರಿದಂತೆ ಸಂಸತ್ತಿನಲ್ಲಿ ಗುರುವಾರ 3 ಪ್ರಮುಖ ಮಸೂದೆಗಳನ್ನು ಪರಿಚಯಿಸಲಾಯಿತು. ಮೊದಲಿಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಮತಕ್ಕೆ ಹಾಕಲಾಯಿತು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿಯ ವಿಧೇಯಕವನ್ನು ಇಂಡಿ ಕೂಟ ಸೋಲಿಸಿದೆ.




