ಕರಾವಳಿಕ್ರೈಂ

ಕಡಬ: ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯ ಬಂಧನ


ಕಡಬ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ವರ್ಷಗಳ ಜೈಲು ಶಿಕ್ಷೆಗೊಳಗಾಗಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಆಂಧ್ರಪ್ರದೇಶದಿಂದ ಬಂಧಿಸಿರುವುದಾಗಿ ವರದಿಯಾಗಿದೆ.



ಸುಳ್ಯ ಅಜ್ಜಾವರ ನಿವಾಸಿ ಎನ್.ಎಂ. ಅಬ್ದುಲ್ ಅಜೀಜ್ ಬಂಧಿತ ಆರೋಪಿ. 2012ರಲ್ಲಿ ಮಹಿಳೆಯೊಬ್ಬರನ್ನು ಕೊಲೆಗೈದು ಮೃತದೇಹವನ್ನು ಕಡಬ ತಾಲೂಕಿನ ಕೊಂಬಾರು ಗ್ರಾಮದ ಅಮೈತಡ್ಕ ಎಂಬಲ್ಲಿ ಸಾರ್ವಜನಿಕ ಮೋರಿಗೆ ಎಸೆದಿದ್ದ ಆರೋಪಿಗೆ ಉಚ್ಚ ನ್ಯಾಯಾಲಯವು ಶಿಕ್ಷೆ ಮತ್ತು 2 ಲಕ್ಷ ದಂಡ ವಿಧಿಸಿ ಆದೇಶಿಸಿತ್ತು. ಆರೋಪಿಯನ್ನು ಕಡಬ ಠಾಣಾ ಉಪನಿರೀಕ್ಷಕ ಹಾಗೂ ಸಿಬ್ಬಂದಿ ಆಂಧ್ರಪ್ರದೇಶದಲ್ಲಿ ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!