ಕರಾವಳಿ

ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಪುತ್ತೂರು: ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ನೂರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ರಕ್ತದ ಒತ್ತಡ, ಶುಗರ್, ಹಿಮೋಗ್ಲೋಬಿನ್, ತೂಕ ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆಗಳು ಉಚಿತವಾಗಿ ನೆರವೇರಿಸಲಾಯಿತು. ತಜ್ಞ ವೈದ್ಯರ ತಂಡವು ಭಾಗವಹಿಸಿದವರಿಗೆ ಆರೋಗ್ಯ ಸಂಬಂಧಿತ ಸಲಹೆಗಳನ್ನು ನೀಡಿದರು.

 

ಕಾರ್ಯಕ್ರಮವನ್ನು ಉದ್ಘಾಟಿಸಿದ ಮೆಡ್‌ಲ್ಯಾಂಡ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ವಿಶಾಲ್ ಯು.ಪಿ ಆಶಾ ಕಾರ್ಯಕರ್ತೆಯರು ಗ್ರಾಮೀಣ ಮಟ್ಟದಲ್ಲಿ ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಪ್ರಶಂಶಿಸಿ ಆಶಾ ಕಾರ್ಯಕರ್ತೆಯರ ಆರೋಗ್ಯದ ಬಗ್ಗೆಯೂ ಕಾಳಜಿ ಅಗತ್ಯ ಎಂದು ಹೇಳಿದರು.


ಆಶಾ ಕಾರ್ಯಕರ್ತೆಯರ ಮೇಲ್ವಿಚಾರರಕಿ ಹರಿಣಿ ಮಾತನಾಡಿ ಇಂತಹ ಉಚಿತ ಶಿಬಿರಗಳು ತಮ್ಮ ಆರೋಗ್ಯವನ್ನು ಪರಿಶೀಲಿಸಲು ಸಹಾಯಕವಾಗಿದೆ ಎಂದು ಮೆಡ್‌ಲ್ಯಾಂಡ್ ಆಸ್ಪತ್ರೆಗೆ ಕೃತಜ್ಞತೆ ಸಲ್ಲಿಸಿದರು. ಆಸ್ಪತ್ರೆಯ ವೈದ್ಯರುಗಳಾದ ಮಧುಮೇಹ ತಜ್ಞೆ ಡಾ ಸ್ವಾತಿ ಪಿ, ಡಾ ಸುಜನ್, ಪಿಆರ್‌ಓ ರಝಾಕ್ ಸಾಲ್ಮರ, ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ರಫೀಕ್ ಎಂ.ಎ ಸವಣೂರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!