ಇಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಎ.ಪಿ ಉಸ್ತಾದ್ ಪುತ್ತೂರಿಗೆ
ಪುತ್ತೂರು: ಎಸ್.ವೈ.ಎಸ್ ಕರ್ನಾಟಕ ಹಮ್ಮಿಕೊಂಡಿರುವ ‘ಮಾದರಿ ಮದುವೆ’ ಅಭಿಯಾನದ ಸಮಾರೋಪ ಸಮ್ಮೇಳನ ಮೇ.2ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಗವಹಿಸಲಿದ್ದು ಖಾಝಿ ಶೈಖುನಾ ಮಾಣಿ ಉಸ್ತಾದ್, ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಸ್ಪೀಕರ್ ಯು.ಟಿ ಖಾದರ್, ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಸ್ವಾಗತ ಸಮಿತಿ ಚೇರ್‌ಮೆನ್ ಯೂಸುಫ್ ಗೌಸಿಯಾ ಸಾಜ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.




