ಕರಾವಳಿರಾಜಕೀಯ

2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸೀಟು ಗೆಲ್ಲಲಿದೆ: ಶಾಸಕ ಅಶೋಕ್ ರೈ



ಪುತ್ತೂರು: ಕಾಂಗ್ರೆಸ್ ಆಡಳಿತದಿಂದ ಜನ ಸಾಮಾನ್ಯರಿಗೆ ನೆಮ್ಮದಿ ಸಿಗುತ್ತದೆ, ಕಾಂಗ್ರೆಸ್ ಕೊಟ್ಟ ಭರವಸೆಯನ್ನು ಈಡೇರಿಸುತ್ತದೆ, ಕಾಂಗ್ರೆಸ್ ನಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂಬ ಕಾರಣಕ್ಕೆ ಕರ್ನಾಟಕ ಉಪಚುನಾವಣೆ ಮತ್ತು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ಗೆ ಆಶೀರ್ವಾದ ನೀಡಿದ್ದಾರೆ, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸೀಟು ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಪ್ರತಿಕ್ರಿಯಿಸಿದ್ದಾರೆ.



ಕರ್ನಾಟಕ ಉಪಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಶಾಸಕರು‘ ಕರ್ನಾಟಕದ ಕಾಂಗ್ರೆಸ್ ಸರಕಾರದ ನೀಡಿದ ಪಂಚ ಗ್ಯಾರಂಟಿ ಇಲ್ಲಿ ಕೆಲಸ ಮಾಡಿದೆ, ಕಾಂಗ್ರೆಸ್ ಸರಕಾರದಿಂದ ಮಾತ್ರ ಅಭಿವೃದ್ದಿ ಸಾಧ್ಯ ಎಂದು ಪಕ್ಷ ಬೇಧ ಮರೆತು ಜನ ವೋಟು ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಕಳೆದ ಬಾರಿ 6 ಸಾವಿರ ವೋಟಿನ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದರು ಆದರೆ ಈ ಬಾರಿ 26 ಸಾವಿರ ಮತಗಳ ಅಂತರದಿಂದ ಗೆದ್ದಿರುವುದು ರಾಜ್ಯ ಸರಕಾರ ಜನಪರ ಯೋಜನೆಗಳೇ ಕಾರಣವಾಗಿದೆ. ಅತ್ಯಂತ ತರ್ಕದ ಕ್ಷೇತ್ರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದು 2028ರ ಚುನಾವಣೆಯ ದಿಕ್ಸೂಚಿಯಾಗಿದೆ, ಮುಂದೇ ನಾವೇ ಕರ್ನಾಟಕದಲ್ಲಿ ಅಧಿಕಾರ ಪಡೆಯಲಿದ್ದೇವೆ ಎಂಬುವುದಕ್ಕೆ ಈ ಚುನಾವಣೆ ಮುನ್ನುಡಿ ಬರೆದಿದೆ ಎಂದು ತಿಳಿಸಿದ್ದಾರೆ.



 

Leave a Reply

Your email address will not be published. Required fields are marked *

error: Content is protected !!