ರಾಜಕೀಯರಾಷ್ಟ್ರೀಯ

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನ ಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆಯಾಗಿದ್ದಾರೆ.

ನೂತನ ಟಿವಿಕೆ ಶಾಸಕರ ಸಭೆ ಚೆನ್ನೈ ಸಮೀಪದ ಪಾನೈಯೂರ್‌ನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ನಡೆಯಿತು. ಸಭೆ ಯಲ್ಲಿ ವಿಜಯ್ ಅವರನ್ನು ಅವಿರೋಧ ವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 



ವಿಜಯ್ ಅವರು ತಮಿಳುನಾಡಿನ ರಾಜ್ಯಪಾಲರನ್ನು ಬುಧವಾರ ಭೇಟಿಯಾಗಲಿದ್ದು, ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!