ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಯುಗಾರಂಭ: ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ
ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಿದೆ. ಬಿಜೆಪಿ ಹಿರಿಯ ನಾಯಕರ ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು, ಅನೇಕ ನಾಯಕರು ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.

ಅದ್ದೂರಿ ಸಮಾರಂಭವು ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು NDA ಪಕ್ಷದ ಹಲವಾರು ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.




